ಮಂಗಳೂರು, ಜು 13 (Daijiworld News/MSP): ವಿಟ್ಲದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಘಟನೆಗೆ ಸಂಬಂಧಿಸಿ ಮತ್ತೋರ್ವನನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಬಂಧಿತನನ್ನು ವಿಟ್ಲಮುಟ್ನೂರು ನಿವಾಸಿ ಪುನೀತ್ ಯಾನೆ ಪುರುಷೋತ್ತಮ (21) ಎಂದು ಗುರುತಿಸಲಾಗಿದೆ. ಬಾಲಕಿ ಶಾಲೆಗೆ ಹೋಗುತ್ತಿದ್ದ ಸಮಯದಲ್ಲಿಯೇ ಮನೆಯ ಸದಸ್ಯರು ಯಾರು ಇಲ್ಲದ ವೇಳೆ ಬಲವಂತವಾಗಿ ದೈಹಿಕ ಸಂಪರ್ಕ ನಡೆಸುತ್ತಿದ್ದ ಎಂದು ಬಾಲಕಿ ದೂರಿದ್ದಳು. ವಿಟ್ಲ ಠಾಣೆಯಲ್ಲಿ ದೂರು ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ.
ಇನ್ನೊಂದೆಡೆ ಐದು ಮಂದಿಯಿಂದ ಪ್ರತ್ಯೇಕ ಸಂದರ್ಭಗಳಲ್ಲಿ ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ ಬಾಲಕಿಯು ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಆರೋಗ್ಯದಿಂದ ಇದ್ದಾರೆ ಎಂದು ತಿಳಿದುಬಂದಿದೆ.