ಕಾರವಾರ, ಜು15(Daijiworld News/SS): ಸಮುದ್ರ ಪಾಲಾಗುತಿದ್ದ ಬೆಂಗಳೂರು ಮೂಲದ ಮೂವರು ಇಂಜಿನಿಯರ್ ವಿದ್ಯಾರ್ಥಿಗಳನ್ನು ಲೈಫ್ ಗಾರ್ಡ್ ಸಿಬ್ಬಂದಿಗಳು ತಮ್ಮ ಜೀವದ ಹಂಗು ತೊರೆದು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ನಡೆದಿದೆ.
ಬೆಂಗಳೂರಿನಿಂದ ಮುರುಡೇಶ್ವರಕ್ಕೆ ಪ್ರವಾಸಕ್ಕೆಂದು ಬಂದ ಐದು ಜನ ಗೆಳೆಯರ ತಂಡ ಸಮುದ್ರದ ಅರ್ಭಟವನ್ನು ಲೆಕ್ಕಿಸದೆ ಸಮುದ್ರದಲ್ಲಿ ಈಜಲು ತೆರಳಿದ್ದರು. ಈ ವೇಳೆ ಸಮುದ್ರದಲೆಗಳ ಸೆಳೆತಕ್ಕೆ ಸಿಲುಕಿ ಅಪಾಯಕ್ಕೆ ಒಳಗಾಗಿದ್ದರು. ಇದನ್ನು ಗಮನಿಸಿದ ಲೈಪ್ ಗಾರ್ಡ್ ಸಿಬ್ಬಂದಿಗಳು ತಮ್ಮ ಜೀವದ ಹಂಗು ತೊರೆದು ರಭಸದ ಅಲೆಯಲ್ಲಿಯೂ ಮೂರು ಜನರನ್ನು ರಕ್ಷಣೆ ಮಾಡಿದ್ದಾರೆ.
ಶಶಿಧರ್ ನಾಯ್ಕ, ಚಂದ್ರಶೇಖರ್ ಹರಿಕಾಂತ್ ರಕ್ಷಣೆ ಮಾಡಿದ ಲೈಪ್ ಗಾರ್ಡ್ ಸಿಬ್ಬಂದಿಗಳಾಗಿದ್ದಾರೆ. ರಕ್ಷಣೆಗೊಳಗಾದವರನ್ನು ಬೆಂಗಳೂರು ಜಿಲ್ಲೆಯ ದೊಡ್ಡ ಬಳ್ಳಾಪುರ ತಾಲೂಕಿನ ಹರೀಶ್ ಎಸ್.ಸಿ (24), ಆನಂದ್ (24), ಸುರೇಶ್ (24) ಎಂದು ಗುರುತಿಸಲಾಗಿದೆ.
ಘಟನೆ ಸಂಬಂಧ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.