ಬಂಟ್ವಾಳ, ಜು 19(Daijiworld News/MSP): ರಾಷ್ಟ್ರೀಯ ಹೆದ್ದಾರಿ 75ರ ಬ್ರಹ್ಮರಕೊಟ್ಲು ಸುಂಕ ವಸೂಲಿ ಕೇಂದ್ರದ ಬಳಿ ಕಾರು ಮತ್ತು ಟ್ಯಾಂಕರ್ ನ ಮಧ್ಯೆ ಭೀಕರ ಅಪಘಾತ ಸಂಭವಿಸಿ ಜು. 19 ರ ಶುಕ್ರವಾರ ನಾಲ್ವರು ಮೃತಪಟ್ಟ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು ಕಡೆಯಿಂದ ಬರುತ್ತಿದ್ದ ಕಾರು ಮತ್ತು ಮಂಗಳೂರು ಕಡೆಯಿಂದ ಬರುತ್ತಿದ್ದ ಟ್ಯಾಂಕರ್ ನಡುವೆ ಈ ಅಪಘಾತ ಸಂಭವಿಸಿದೆ.
ಟ್ಯಾಂಕರ್ ಢಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೃತರೆಲ್ಲರು ಭಟ್ಕಳ ಮೂಲದವರೆಂದು ತಿಳಿದು ಬಂದಿದ್ದು, ಕಾರು ಚಾಲಕನ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವೆಂದು ತಿಳಿದು ಬಂದಿದೆ.
ಭೀಕರ ಅಪಘಾತದಿಂದಾಗಿ ಸಂಚಾರ ಅಸ್ತವ್ಯಸ್ತಗೊಂಡಿದೆ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.