ಕಾಸರಗೋಡು, ಜು 20 (Daijiworld News/MSP): ಕೇರಳ ಲೋಕಸೇವಾ ಆಯೋಗದ ರ್ಯಾಂಕ್ ಪಟ್ಟಿಯಲ್ಲಿನ ಲೋಪ ಪ್ರತಿಭಟಿಸಿ ಯೂತ್ ಲೀಗ್ ಕಾರ್ಯಕರ್ತರು ಶನಿವಾರ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಗೆ ನಡೆಸಿದ ಪ್ರತಿಭಟನಾ ಜಾಥಾ ಹಿಂಸೆಗೆ ತಿರುಗಿದ್ದು , ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ.
ವಿದ್ಯಾನಗರ ಸರಕಾರಿ ಕಾಲೇಜು ಪರಿಸರದಿಂದ ಹೊರಟ ಮೆರವಣಿಗೆಯನ್ನು ಜಿಲ್ಲಾಧಿಕಾರಿ ಕಚೇರಿ ದ್ವಾರದ ಬಳಿ ಪೊಲೀಸರು ತಡೆ ಒಡ್ಡಿದ್ದಾರೆ. ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್ ಗಳನ್ನು ತಳ್ಳಿ ಮುನ್ನುಗ್ಗಲೆತ್ನಿಸಿದ್ದು, ಈ ಸಂದರ್ಭದಲ್ಲಿ ಪೊಲೀಸರು ಜಲಫಿರಂಗಿ ಪ್ರಯೋಗಿಸಿ ನಿಯಂತ್ರಣಕ್ಕೆ ತಂದಿದ್ದಾರೆ.
ಬಳಿಕ ನಡೆದ ಪ್ರತಿಭಟನೆಯನ್ನು ಯೂತ್ ಲೀಗ್ ರಾಷ್ಟ್ರೀಯ ಉಪಾಧ್ಯಕಹ್ ಫೈಝಲ್ ಬಾಬು ಉದ್ಘಾಟಿಸಿದರು. ಜಿಲ್ಲಾಧ್ಯಕ್ಷ ಅಶ್ರಫ್ ಎಡನೀರು ಅಧ್ಯಕ್ಷತೆ ವಹಿಸಿದ್ದರು.