ಮಂಗಳೂರು, ಜು 22 (Daijiworld News/MSP): ಕಳೆದೆರಡು ದಿನಗಳಿಂದ ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಕೆಪಿಟಿ ಸರ್ಕಲ್ ನಿಂದ ಬಿಜೈ ಕಡೆಗೆ ಹೋಗುವ ರಸ್ತೆಯಲ್ಲಿರುವ ಸರ್ಕಿಟ್ ಹೌಸ್ ಬಳಿ ಇರುವ ಗುಡ್ಡ ಕುಸಿದು ರಸ್ತೆಗೆ ಬಿದ್ದು ಸಂಚಾರಕ್ಕೆ ಅಡ್ಡಿ ಉಂಟಾದ ಘಟನೆ ಜು. 22 ರ ಸೋಮವಾರ ಬೆಳಗ್ಗೆ ನಡೆದಿದೆ.
ಮಳೆ ಹಾಗೂ ಗುಡ್ಡ ಕುಸಿತದಿಂದ ರಸ್ತೆಯೆಲ್ಲಾ ಕೆಸರುಮಯವಾಗಿದ್ದು, ಸ್ಥಳಕ್ಕೆ ಆಗಮಿಸಿದ ಕದ್ರಿ ಸಂಚಾರಿ ಪೊಲೀಸರು ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡರು. ಆ ಬಳಿಕ ಜೆಸಿಬಿ ಬಳಸಿ ರಸ್ತೆಗೆ ಬಿದ್ದ ಮಣ್ಣು ತೆರವು ಕಾರ್ಯಚರಣೆ ನಡೆಸಲಾಯಿತು.