ಮಂಗಳೂರು, ಜು 22 (Daijiworld News/RD): ಅಕ್ರಮವಾಗಿ ಕೇರಳಕ್ಕೆ ಸಾಗಾಟ ಮಾಡುತ್ತಿದ್ದ ಜಾನುವಾರುಗಳನ್ನು ಉಳ್ಳಾಲ ಪೊಲೀಸರು ಮಿಂಚಿನ ಕಾರ್ಯಚರಣೆ ನಡೆಸಿ ವಶಪಡಿಸಿಕೊಂಡ ಘಟನೆ ಜು.22 ರ ಸೋಮವಾರ ಮುಂಜಾನೆ ನಡೆದಿದೆ.
ಪೊಲೀಸ್ ಅಧಿಕಾರಿ ಗೋಪಿಕೃಷ್ಣ ಅವರ ನೇತೃತ್ವದಲ್ಲಿ ಉಳ್ಳಾಲ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 7 ಕೋಣ, 3 ಎಮ್ಮೆ ಸೇರಿ ಹತ್ತು ಜಾನುವಾರುಗಳನ್ನು ರಕ್ಷಿಸಲಾಯಿತು.
ತಲಪಾಡಿಯಲ್ಲಿ ಬಳಿ ದಾಳಿ ನಡೆದಿದ್ದು, ಈ ಸಂದರ್ಭ ಕೃತ್ಯಕ್ಕೆ ಬಳಸಿದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.