ಮಂಗಳೂರು,ಸೆ.13: ಹಿರಿಯ ಪತ್ರಕರ್ತೆ, ಚಿಂತಕಿ ಗೌರಿ ಲಂಕೇಶ್ ಹಂತಕರನ್ನು ಬಂಧಿಸಬೇಕೆಂದು ಆಗ್ರಹಿಸಿ ನ್ಯಾಷನಲ್ ವಿಮೆನ್ಸ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಮಂಗಳೂರು ದ.ಕ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು.
ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಕಗ್ಗೊಲೆಯಾಗಿದ್ದು, ಹತ್ಯೆಯ ಪಾತ್ರಧಾರಿಗಳು ಮತ್ತು ಸಂಚುಕೋರರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ಸಾಮಾಜಿಕ ಜಾಲ ತಾಣಗಳಲ್ಲಿ ಗೌರಿ ಲಂಕೇಶ್ ವಿರುದ್ಧ ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಅನ್ಯಾಯದ ವಿರುಧ್ಧ ಸೆಟೆದೆದ್ದವರನ್ನು ಈ ರೀತಿಯಾಗಿ ಕಗ್ಗೊಲೆ ನಡೆಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭ ಎನ್ ಡಬ್ಲ್ಯೂ ಎಫ್ ರಾಷ್ಟ್ರೀಯ ಸಮೀತಿ ಸದಸ್ಯೆ ಶಾಹಿದಾ ಅಸ್ಲಮ್, ಕೆ.ಸಿ ರೋಡ್ ನ ಝೀನತ್ ಎಜುಕೇಶನಲ್ ಟ್ರಸ್ಟ್ ನ ಪ್ರಾಂಶುಪಾಲೆ ಮೆಹನಾಝ್, ಯಶೋಧಾ, ನಸ್ರಿಯಾ, ಫಾತಿಮಾ ನಸೀಮಾ, ಶಾಹನಾಝ್, ಮೈಮುನಾ ಮತ್ತಿತರರು ಉಪಸ್ಥಿತರಿದ್ದರು.