ಬಂಟ್ವಾಳ, ಫೆ. 21 (DaijiworldNews/TA): ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ಮೇರಮಜಲು ನಿವಾಸಿ ಪ್ರಶಾಂತ್ @ ಪ್ರಸಾದ್ (30) ಎಂದು ಗುರುತಿಸಲಾಗಿದೆ.

ಬಂಧಿತನನ್ನು ವಿಚಾರಣೆ ನಡೆಸಿದ ಪೊಲೀಸರು ಈತ ಗಾಂಜಾವನ್ನು ಶೇಖರಿಸಿಟ್ಟು ಗಿರಾಕಿಗಳಿಗೆ ಮಾರಾಟ ಮಾಡಲು ಬಂದಿರುವುದಾಗಿ ತಿಳಿಸಿದ್ದ, ತಪಾಸಣೆಯ ವೇಳೆ ಆತನ ಬಳಿ 180 ಗ್ರಾಂ ಗಾಂಜಾವನ್ನು ಪತ್ತೆಯಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾದಕವಸ್ತು, ದ್ವಿಚಕ್ರ ವಾಹನ ಸಹಿತ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.