ಸುಳ್ಯ, ಫೆ. 22 (DaijiworldNews/TA): ಚಲಿಸುತ್ತಿದ್ದ ಕಾರಿಗೆ ಹಿಂಭಾಗದಿಂದ ಬಂದ ಕಾರೊಂದು ಡಿಕ್ಕಿಯಾಗಿ ನಾಲ್ವರು ಗಾಯಗೊಂಡ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಸುಳ್ಯ ತಾಲೂಕಿನ ಜಾಲ್ಸೂರಿನ ಬೊಳುಬೈಲು ಎಂಬಲ್ಲಿ ಶನಿವಾರ ಸಂಭವಿಸಿದೆ.


ಸುಳ್ಯದ ಹಳೆಗೇಟಿನ ವಸಂತ/ಚಂದ್ರಶೇಖರ ಅವರು ಮನೆಯವರೊಂದಿಗೆ ಕಾರಿನಲ್ಲಿ ತನ್ನ ಗೃಹಪ್ರವೇಶ ಹಿನ್ನೆಲೆಯಲ್ಲಿ ಬಟ್ಟೆ ಖರೀದಿಸಲು ತೆರಳುತ್ತಿದ್ದರು. ಈ ವೇಳೆಯಲ್ಲಿ ಕಾರಿನ ಚಾಲಕ ಅದನ್ನು ಅಜಾಗರೂಕತೆ ಮತ್ತು ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಮುಂದೆ ಹೋಗುತ್ತಿದ್ದ ವಸಂತ ಅವರ ಕಾರಿಗೆ ಗುದ್ದಿದ್ದಾನೆ ಎನ್ನಲಾಗಿದೆ.
ಪರಿಣಾಮ ಅವರ ಕಾರು ನಿಯಂತ್ರಣ ತಪ್ಪಿದ್ದು, ಎರಡೂ ಕಾರುಗಳು ಜಖಂಗೊಂಡಿದೆ. ಘಟನೆಯಲ್ಲಿ ವಸಂತ, ರಮ್ಯ, ರಶ್ಮಿ, ಆದ್ವಿತ್ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿಕೊಂಡಿದ್ದಾರೆ.