ಮಂಗಳೂರು, ಜು 31(Daijiworld News/MSP): ಕಾಫಿ ಡೇ ಸಂಸ್ಥಾಪಕ, ಮಾಜಿ ಕೇಂದ್ರ ಸಚಿವ ಎಸ್ ಎಂ ಕೃಷ್ಣ ಅಳಿಯ, ಉದ್ಯಮಿ ವಿಜಿ ಸಿದ್ದಾರ್ಥ ಮೃತದೇಹ ಬುಧವಾರ ಬೆಳಗ್ಗೆ ಉಳ್ಳಾಲ ಸೇತುವೆಯಿಂದ ಸುಮಾರು 1 ಕಿಲೋ ಮೀಟರ್ ದೂರದ ಮುಳಿಹಿತ್ಲುವಿನನ ಹೊಯ್ಗೆ ಬಜಾರ್ ಪ್ರದೇಶದಲ್ಲಿ ಮೃತದೇಹ ಪತ್ತೆಯಾಗಿದೆ. ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ವರದಿ ಪರಿಕ್ಷೆಯ ಬಳಿಕ ಮೃತದೇಹವನ್ನು ಸಂಬಂಧಿಕರಿಗೆ ಬಿಟ್ಟುಕೊಡಲಾಗಿದ್ದು, ಸಿದ್ದಾರ್ಥ ಹುಟ್ಟೂರು ಚಿಕ್ಕಮಗಳೂರಿನಲ್ಲಿಯೇ ಅಂತ್ಯಸಂಸ್ಕಾರ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
ಈ ಹಿನ್ನಲೆಯಲ್ಲಿ ಸಿದ್ದಾರ್ಥ್ ತವರೂರಾದ ಚಿಕ್ಕಮಗಳೂರಿನ ಚೇತನಹಳ್ಳಿಯತ್ತ ಸಿದ್ಧಾರ್ಥ ಅವರ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುತ್ತಿದೆ. ಸಂಜೆ 6.30ರ ನಂತರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇದಕ್ಕೂ ಮುನ್ನ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಸಿದ್ಧಾರ್ಥ ಅವರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು, ಭಾರಿ ಸಂಖ್ಯೆಯಲ್ಲಿ ಜನ ಆಗಮಿಸಿ ಅವರ ಪಾರ್ಥಿವ ಶರೀರಕ್ಕೆ ನಮನ ಸಲ್ಲಿಸಿದ್ದರು.