ಪುತ್ತೂರು, ಜು 02 (Daijiworld News/MSP): ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರೊಂದು ರಸ್ತೆಯಲ್ಲಿ ಪಲ್ಟಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಸಮೀಪದ ಲಾವತ್ತಡ್ಕ ರೆಖ್ಯ ಎಂಬಲ್ಲಿ ಆ. 02ರ ಶುಕ್ರವಾರ ಸಂಭವಿಸಿದೆ.
ಮಂಗಳೂರಿನಿಂದ ಗ್ಯಾಸ್ ತುಂಬಿಸಿಕೊಂಡು ಬೆಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ರೆಖ್ಯ ಸಮೀಪದ ತಿರುವಿನಲ್ಲಿ ರಸ್ತೆಗಡ್ಡವಾಗಿ ಮಗುಚಿ ಬಿದ್ದಿದೆ. ಪರಿಣಾಮ ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದಾರೆ.
ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಪರ್ಯಾಯವಾಗಿ ಗುಂಡ್ಯ ಹಾಗೂ, ಇಚಿಲಂಪಾಡಿ - ಮರ್ಧಾಳ - ಉಪ್ಪಿನಂಗಡಿ ಮಾರ್ಗಗಳನ್ನು ಸಂಚರಿಸುವಂತೆ ಪೊಲೀಸರು ಸೂಚಿಸಿದ್ದಾರೆ.