ನವದೆಹಲಿ, ಡಿ 18: ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಮಾಜಿ ಸಂಸದೆ ರಮ್ಯಾ ಅವರು ಬಿಜೆಪಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳ ವಿಧಾನಸಭಾ ಚುನಾವಣಾ ಫಲಿತಾಂಶ ಹಿನ್ನಲೆಯಲ್ಲಿ ರಮ್ಯಾ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಬಿಜೆಪಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಬಿಜೆಪಿಗೆ ಅಭಿನಂದನೆಗಳು. ನಾವಿನ್ನೂ ಸೋಲೊಪ್ಪುವುದಿಲ್ಲ. ನಾವು ಇಲ್ಲಿಗೆ ಸುಲಭವಾಗಿ ಬಿಟ್ಟು ಕೊಡುವುದಿಲ್ಲ ಎಂದು ಟ್ವೀಟ್ ಮಾಡುವ ಮೂಲಕ ಬಿಜೆಪಿಯ ಕಾಲೆಳೆದಿದ್ದಾರೆ.