ಮಂಗಳೂರು, ಮಾ. 28 (DaijiworldNews/AA): ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಮಂಗಳೂರು ಮತ್ತು ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ವಿಶ್ವ ರಂಗಭೂಮಿ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಈ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮೂವರು ರಂಗ ಸಾಧಕರಿಗೆ ಗೌರವ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮಕ್ಕೆ ಅಗರಿ ಎಂಟರ್ಪ್ರೈಸಸ್ ಮಾಲಕರಾದ ಮಂಗಳೂರು ಮೂಲದ ಅಗರಿ ರಾಘವೇಂದ್ರ ರಾವ್, ಕೆನರಾ ಪದವಿಪೂರ್ವ ಕಾಲೇಜಿನ ಡೀನ್ ಗೋಪಾಲಕೃಷ್ಣ ಶೆಟ್ಟಿ ಹಾಗೂ ಮಂಗಳೂರು ಎಕ್ಸ್ಪರ್ಟ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಕರುಣಾಕರ ಬಲ್ಕೂರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಭರತನಾಟ್ಯ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ ಗುರು ವಿದುಷಿ ಸುಮಂಗಲಾ ರತ್ನಾಕರ ರಾವ್, ರೋಟರಿ ಸಂಸ್ಥೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ ಮತ್ತು ಕಲಾ ಪೋಷಕರಾಗಿರುವ ಉದ್ಯಮಿ ಸತೀಶ್ ಬೋಳಾರ್, ಕಲಾಸೇವೆ ಕ್ಷೇತ್ರದಲ್ಲಿ ಮತ್ತು ರಂಗಸಂಘಟಕ ಹಾಗೂ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಕರುಣಾಕರ ಶೆಟ್ಟಿಯ ಅವರನ್ನು ಮಲಬಾರ್ ವಿಶ್ವ ರಂಗ ಭೂಮಿ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮವನ್ನು ರಂಗ ಸಂಗತಿ ಮಂಗಳೂರು ಇದರ ಸಂಚಾಲಕರಾದ ಶಶಿರಾಜ್ ರಾವ್ ಕಾವೂರ್ ಅವರು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಮಂಗಳೂರು ಸ್ಟೋರ್ ಹೆಡ್ ಹಫೀಜ್ ರಹ್ಮಾನ್, ಅಸಿಸ್ಟೆಂಟ್ ಸ್ಟೋರ್ ಹೆಡ್ ನಜರ್ ಅಹಮ್ಮದ್, ಬ್ರಾಂಚ್ ಮ್ಯಾನೇಜರ್ ರಘುರಾಮ್ ಸಿಎಸ್, ಮಾರ್ಕೆಟಿಂಗ್ ಮ್ಯಾನೇಜರ್ ಶೇಖ್ ಫರ್ಹಾನ್, ಸೇಲ್ಸ್ ಮೇನೇಜರ್ ಗಿರೀಶ್ ಶೆಟ್ಟಿ, ಸಮೀರ್ ಡೆಪ್ಯೂಟಿ ಸೇಲ್ಸ್ ಮ್ಯಾನೇಜರ್ ಮತ್ತಿತರರು ಉಪಸ್ಥಿತರಿದ್ದರು.