ಉಡುಪಿ, ಆ.06 (Daijiworld News/RD): ಶಾಸಕರಾದ ಕೆ ರಘುಪತಿ ಭಟ್ ಹಾಗೂ ಉಡುಪಿ ಸಂಸದೆ ಶೋಭಾ ಕರಂದ್ಲಾಜೆಯವರ ನೇತೃತ್ವದಲ್ಲಿ ಕೇಂದ್ರ ಪಶುಸಂಗೋಪನಾ ಮತ್ತು ಮೀನುಗಾರಿಕಾ ಇಲಾಖೆಯ ಸಚಿವರಾದ ಶ್ರೀ ಗಿರಿರಾಜ್ ಸಿಂಗ್ರವರನ್ನು ಮೀನುಗಾರರ ನಿಯೋಗದೊಂದಿಗೆ ಭೇಟಿಯಾಗಿ ಮೀನುಗಾರರ ವಿವಿಧ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಿದರು.
ಮನವಿಗೆ ಶೀಘ್ರವಾಗಿ ಸ್ಪಂದಿಸಿದ ಸಚಿವರು ಮೀನುಗಾರಿಕೆ ಅಭಿವೃದ್ಧಿ ಬಗ್ಗೆ ಸೂಕ್ತ ಯೋಜನೆ ರೂಪಿಸುವ ಬಗ್ಗೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಅಖಿಲ ಭಾರತ ಮೀನುಗಾರ ವೇದಿಕೆಯ ಅಧ್ಯಕ್ಷರಾದ ಶ್ರೀ ವೆಲ್ಜಿ ಭಾಯಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಶ್ರೀ ಯಶ್ ಪಾಲ್ ಸುವರ್ಣ, ಮಲ್ಪೆ ಮೀನುಗಾರರ ಸಂಘದ ನಿಕಟಪೂರ್ವ ಅಧ್ಯಕ್ಷ ಶ್ರೀ ಸತೀಶ್ ಕುಂದರ್, ಶ್ರೀ ದಯಾನಂದ ಸುವರ್ಣ, ಮೊದಲಾದವರು ಉಪಸ್ಥಿತರಿದ್ದರು.