ಉಳ್ಳಾಲ, ಮಾ. 30 (DaijiworldNews/TA): ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿ ಸಮೀಪದ ತಿಬ್ಲಪದವು ಮಸೀದಿ ಸಭಾಂಗಣದ ಬಳಿ ಕಾರು ಅಪಘಾತ ಸಂಭವಿಸಿದೆ.

ಕೋಣಾಜೆ ಕಡೆಯಿಂದ ದೇರಳಕಟ್ಟೆ ಕಡೆಗೆ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಸುಮಾರು 10 ಅಡಿ ಆಳಕ್ಕೆ ಜಿಗಿದು, ಸಭಾಂಗಣ ಕಟ್ಟಡದ ಗೋಡೆಗೆ ಅಪ್ಪಳಿಸಿ ಕೆಳಕ್ಕೆ ಉರುಳಿದೆ. ಅಪಘಾತದ ತೀವ್ರತೆ ಭೀಕರವಾಗಿದ್ದು, ಆದರೆ ಅದೃಷ್ಟವಶಾತ್ ವಾಹನದಲ್ಲಿದ್ದವರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಕುರಿತು ಮಂಗಳೂರು ದಕ್ಷಿಣ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.