ಮಂಗಳೂರು, ಮಾ. 30 (DaijiworldNews/TA): ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದ.ಕ. ಹಾಗೂ ಜೈನ ಸೊಸೈಟಿ ಮಂಗಳೂರು ವತಿಯಿಂದ ಮಂಗಳೂರಿನ ಬಜಿಲಕೇರಿ ಶ್ರೀ ಆದೀಶ್ವರ ಸ್ವಾಮಿ ಜೈನ ಬಸದಿಯಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು.

ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣದ ಅಧ್ಯಕ್ಷೆ ಲಾವಣ್ಯ ಬಲ್ಲಾಲ್ ಮಾತನಾಡಿ, ಭಗವಾನ್ ಮಹಾವೀರರ ತತ್ವಗಳು ಇಂದಿನ ಸಮಾಜಕ್ಕೆ ಅಗತ್ಯವಾಗಿದೆ. ಅವುಗಳನ್ನು ನಾವು ಪಾಲಿಸಿಕೊಂಡು ಇತರರಿಗೂ ಬದುಕುವ ಅವಕಾಶವನ್ನು ನೀಡಬೇಕು ಎಂದರು. ಕಾರ್ಯಕ್ರಮದಲ್ಲಿ ಜೈನ್ ಮಿಲಾನ್ ಅಧ್ಯಕ್ಷ ರತ್ನಾಕರ್ ಜೈನ್, ಮಂಗಳೂರು ಜೈನ ಸೊಸೈಟಿಯ ಗೌರವಾಧ್ಯಕ್ಷ ಸುರೇಶ್ ಬಲ್ಲಾಲ್, ಕಾರ್ಯದರ್ಶಿ ಸಚಿನ್ ಜೈನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ. ಇದ್ದರು.