ಬಂಟ್ವಾಳ, ಮಾ. 30 (DaijiworldNews/TA): ವರ್ಧಮಾನ ಮಹಾವೀರ ಸಂದೇಶದಲ್ಲಿ ಸತ್ಯ, ಅಹಿಂಸೆ ಅಡಗಿದೆ, ಯಾರೂ ಕೀಳಲ್ಲ, ಮೇಲಲ್ಲ ಎಂಬ ಮಾತನ್ನು ಸಾರಿ ಹೇಳಿದ್ದಾರೆ, ಅವರ ಸಂದೇಶ ಇಂದಿನ ದಿನಗಳಲ್ಲಿ ಪ್ರಸ್ತುತವಾಗಿದೆ ಎಂದು ಬಂಟ್ವಾಳದ ನ್ಯಾಯವಾದಿ ಶಿವಪ್ರಕಾಶ್ ಹೆಗ್ಡೆ ಹೇಳಿದರು.

ಬಂಟ್ವಾಳ ತಾಲೂಕು ಕಚೇರಿಯ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಜೈನ್ ಮಿಲನ್ ಸಹಯೋಗದೊಂದಿಗೆ ಸೋಮವಾರ ನಡೆದ ಭಗವಾನ್ ವರ್ಧಮಾನ ಮಹಾವೀರ ಜಯಂತಿ ಆಚರಣೆಯಲ್ಲಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ತಹಸೀಲ್ದಾರ್ ಮಂಜುನಾಥ್ ಮಾತನಾಡಿ, ಎರಡು ಸಾವಿರ ವರ್ಷಗಳ ನಂತರವೂ ಮಹಾವೀರರನ್ನು ಸ್ಮರಿಸಬೇಕೆಂದರೆ ಅವರ ತತ್ವಾದರ್ಶಗಳೇ ಕಾರಣ ಎಂದರು.
ಈ ಸಂದರ್ಭ ಜೈನ್ ಮಿಲನ್ ಬಂಟ್ವಾಳ ಅಧ್ಯಕ್ಷ ರಾಜೇಂದ್ರ ಜೈನ್, ಉಪತಹಸೀಲ್ದಾರ್ ನರೇಂದ್ರನಾಥ ಮಿತ್ತೂರು, ಜೈನ್ ಮಿಲನ್ ಬಂಟ್ವಾಳ ಕಾರ್ಯದರ್ಶಿ ಜಯಕೀರ್ತಿ ಜೈನ್, ವಿಭಾಗ ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್ ಸೇ॑ರಿದಂತೆ ನಾನಾ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.