ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತ - ಸಂಚಾರ ಅಸ್ತವ್ಯಸ್ತ
Tue, Aug 06 2019 11:20:49 AM
ಬೆಳ್ತಂಗಡಿ, (Daijiworld News/MSP): ರಾಜ್ಯದೆಲ್ಲೆಡೆ ಮುಂಗಾರು ಚುರುಕುಗೊಂಡಿದ್ದು, ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದೆ. ವಿಪರೀತ ಮಳೆಯ ಪರಿಣಾಮ ಚಾರ್ಮಾಡಿ ಘಾಟಿಯಲ್ಲಿ ಮೂರು ಕಡೆ ಧರೆ ಕುಸಿತವಾಗಿದೆ.ಇನ್ನು ಘಾಟ್ ನ ಚಾರ್ಮಾಡಿ ಘಾಟ್ ನ ಏಳನೇ ತಿರುವಿನಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದು, ವಾಹನ ಸಂಚಾರಕ್ಕೆ ತಡೆಯುಂಟಾಗಿದೆ ಎಂದು ವರದಿಯಾಗಿದೆ.
ಇನ್ನೊಂದೆಡೆ ಅರಬ್ಬಿ ಸಮುದ್ರದಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವುದರಿಂದ ಅಲೆಗಳ ಅಬ್ಬರವೂ ಜೋರಾಗಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.