ಉಡುಪಿ, ಆ 07 (DaijiworldNews/SM): ಉಡುಪಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆ ಆಗಸ್ಟ್ 8ರಂದು ಕೂಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ರಜೆ ಆದೇಶ ಹೊರಡಿಸಿದ್ದಾರೆ.
ಈಗಾಗಲೇ ಸೋಮವಾರದಿಂದ ಕರಾವಳಿ ಭಾಗದಲ್ಲಿ ಬಿರುಸಿನಿಂದ ಮಳೆ ಸುರಿಯುತ್ತಿದ್ದು, ಬುಧವಾರದಂದು ಸ್ವಲ್ಪ ಸಹಜ ಸ್ಥಿತಿಗೆ ಬಂದಿತ್ತು. ಇದರಿಂದ ತುಂಬಿ ಹರಿಯುತ್ತಿದ್ದ ಹಳ್ಳ, ನದಿಗಳಲ್ಲಿ ನೀರಿನ ಪ್ರಮಾಣ ಇಳಿಕೆಯಾಗಿತ್ತು. ಆದ್ರೆ, ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಲ್ಲಿ ಮುಂಜಾಗೃತ ಕ್ರಮವಾಗಿ ಗುರುವಾರದಂದೂ ಕೂಡ ರಜೆ ಘೋಷಿಸಲಾಗಿದೆ.