ಮಂಗಳೂರು, ಆ 10 (Daijiworld News/MSP): ಜೆಎನ್ಯು ವಿದ್ಯಾರ್ಥಿ ಸಂಘಟನೆಗಳ ಮಾಜಿ ಅಧ್ಯಕ್ಷ, ಯುವ ನೇತಾರ ಕನ್ಹಯ್ಯ ಕುಮಾರ್ ಮಂಗಳೂರಿನಲ್ಲಿ ಪ್ರತಿಭಟನೆಯ ಬಿಸಿ ತಟ್ಟಿದೆ. ಶನಿವಾರ ನಗರದ ಬಲ್ಮಠದ ಸಹೋದಯ ಸಭಾಂಗಣದಲ್ಲಿ ಬಿವಿ ಕಕ್ಕಿಲಾಯ ಶತಾಬ್ದಿ ಕಾರ್ಯಕ್ರಮಕ್ಕೆ ಕನ್ಹಯ್ಯ ಕುಮಾರ್ ಆಗಮಿಸಿದ್ದರು. ಈ ಕಾರ್ಯಕ್ರಮಕ್ಕೆ ಡಾ.ಕನ್ಹಯ್ಯ ಕುಮಾರ್ ಭಾಗವಹಿಸಿದ್ದನ್ನು ವಿರೋಧಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಗೆ ಯತ್ನಿಸಿದ್ದಾರೆ. ಈ ಸಂದರ್ಭ ಎಚ್ಚೆತ್ತುಕೊಂಡ ಎಬಿವಿಪಿ ಹಾಗೂ ರಾಮಸೇನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಕರ್ನಾಟಕ ಏಕೀಕರಣ ಚಳವಳಿಯ ಧುರೀಣ ಬಿ.ವಿ.ಕಕ್ಕಿಲ್ಲಾಯರ ಜನ್ಮ ಶತಾಬ್ದಿ ಅಂಗವಾಗಿ ಸಹೋದಯ ಸಭಾಂಗಣದಲ್ಲಿ ಆ.10 ಶನಿವಾರ ಹಾಗೂ ಆ. 11 ಭಾನುವಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕನ್ಹಯ್ಯ ಕುಮಾರ್ ಭಾಷಣ ಆರಂಭಕ್ಕೂ ಮುನ್ನ ಎಬಿವಿಪಿ ಕಾರ್ಯಕರ್ತರೆನ್ನಲಾದ ಏಳೆಂಟು ಮಂದು ಮಂದಿ ಸಭಾಂಗಣದೊಳಗೆ ಪ್ರವೇಶಿಸಿದ್ದರು. ಇದನ್ನು ಗಮನಿಸಿದ ಪೊಲೀಸರು ಅವರನ್ನು ವಶಕ್ಕೆ ಪಡೆದರು.
ಈ ವೇಳೆ ಹಿಂದೂ ಸಂಘಟನೆಯ 30 ಅಧಿಕ ಮಂದಿ ಸಭಾಂಗಣದ ಹೊರಕ್ಕೆ ಜಮಾಯಿಸಿ ಪ್ರತಿಭಟನೆ ಕೂಗುತ್ತಿದ್ದಂತೆ ಅವರನ್ನೂ ವಶಕ್ಕೆ ಪಡೆಯಲಾಯಿತು.