ಬೆಂಗಳೂರು,ಸೆ.13: ದ.ಕ ಜಿಲ್ಲೆಯ ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಬ್ದುಲ್ ಜಲೀಲ್ ಅವರ ಕೊಲೆಯಾಗುವ ಮುನ್ನ ಅವರಿಗೆ ವಿದೇಶದಿಂದ ಬೆದರಿಕೆ ಕರೆಗಳು ಬಂದಿರುವ ಹಿನ್ನೆಲೆಯಲ್ಲಿ ಕರೆಯ ದಾಖಲೆಗಳನ್ನು ಸಲ್ಲಿಸುವಂತೆ ವಿಟ್ಲ ಠಾಣಾ ಪೊಲೀಸರಿಗೆ ಹೈಕೋರ್ಟ್ ಸೂಚಿಸಿದೆ.
ಅಬ್ದುಲ್ ಜಲೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತಮ್ಮ ಮನೆಯನ್ನು ಶೋಧನೆಗೆ ಅಧೀನ ನ್ಯಾಯಾಲಯ ಮಾಡಿದ ಆದೇಶವನ್ನು ರದ್ದು ಪಡಿಸುವಂತೆ ಮತ್ತು ಮನೆಯಿಂದ ವಶಪಡಿಸಿದ ವಸ್ತುಗಳನ್ನು ಹಿಂದಿರುಗಿಸುವಂತೆ ಹೈಕೋರ್ಟ್ ಗೆ ಅರ್ಜಿಸಲ್ಲಿಸಲಾಗಿತ್ತು.
ಕೊಲೆಯಾಗುವ ಮುನ್ನ ಭೂಗತ ದೊರೆ ವಿಕ್ಕಿ ಶೆಟ್ಟಿ ವಿದೇಶದಿಂದ ಕರೆ ಮಾಡಿ ಬೆದರಿಕೆ ಒಡ್ಡಿದ್ದ ಎಂಬ ಆರೋಪದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ಪೀಠ ವಿಟ್ಲ ಪೊಲೀಸರಿಗೆ ಕರೆಗಳ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿದೆ.