ಡಿ 21 : ದೇಶದ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿ, ಜಾಗತಿಕವಾಗಿ ಚರ್ಚೆಗೆ ಗ್ರಾಸವಾಗಿದ್ದ 2ಜಿ ಸ್ಪೆಕ್ಟ್ರಂ ಹಂಚಿಕೆ ಹಗರಣದ ಕುರಿತು ಸಿಬಿಐ ಕೋರ್ಟ್ ಡಿ ೨೧ ರ ಗುರುವಾರ ಪ್ರಕಟಿಸಿದೆ. ಇದರೊಂದಿಗೆ ಕೇಂದ್ರದ ದೂರಸಂಪರ್ಕ ಮಾಜಿ ಸಚಿವ ಎ. ರಾಜಾ, ಡಿ ಎಂ ಕೆ ಮಾಜಿ ಸಂಸದೆ ಕನಿಮೋಳಿ ಸೇರಿದಂತೆ ಎಲ್ಲಾ 17 ಮಂದಿ ಆರೋಪಿಗಳನ್ನು ಕೋರ್ಟ್ ಖುಲಾಸೆಗೊಳಿಸಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಸಿಎಜಿ ಬಯಲಿಗೆಳೆದಿದ್ದ 1.76 ಲಕ್ಷ ಕೋಟಿ ರೂ. ಮೊತ್ತದ 2ಜಿ ಸ್ಪೆಕ್ಟ್ರಂ ಹಗರಣ ದೇಶವದಲ್ಲಿಯೇ ಸಂಚಲನ ಹುಟ್ಟುಹಾಕಿತ್ತು.ಕೋರ್ಟ್ನ ತೀರ್ಪು ತಮಿಳು ನಾಡು ರಾಜಕಾರಣದಲ್ಲಿ ಭಾರೀ ಬದಲಾವಣೆ ತರುವ ಸಾಧ್ಯತೆಗಳಿವೆ
ಏನಿದು 2ಜಿ ಹಗರಣ?
2ಜಿ (ಸೆಕೆಂಡ್ ಜನರೇಶನ್ ದೂರಸಂಪರ್ಕ ಸೇವೆ) ಮೊಬೈಲ್ ಸೇವೆಗೆ 2008 ರಲ್ಲಿ ಆಗಿನ ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿ ಸರ್ಕಾರ 9 ದೂರಸಂಪರ್ಕ ಕಂಪೆನಿಗಳಿಗೆ ಬೇಕಾಬಿಟ್ಟಿ ಲೈಸೆನ್ಸ್ ನೀಡಿದ ಪ್ರಕರಣ ಇದು. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕಾದ ನಷ್ಟ, ,1,76,000 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿತ್ತು.