ಪುತ್ತೂರು, ಅ 15 (Daijiworld News/MSP): ಅನಾರೋಗ್ಯದಿಂದ ಸಾವನ್ನಪ್ಪಿದ ಬಾಲಕಿ ಮೂರು ತಿಂಗಳ ಗರ್ಭಿಣಿ ಎಂದು ವೈದ್ಯಕೀಯ ಪರೀಕ್ಷೆಯಿಂದ ತಿಳಿದು ಬಂದ ಪ್ರಕರಣಕ್ಕೆ ಸಂಬಂಧಿಸಿ ಬಾಲಕಿ ಮೇಲೆ ಅತ್ಯಾಚಾರಗೈದ ಆರೋಪಿಯನ್ನು ಸಂಪ್ಯ ಪೊಲೀಸರು ಪೋಕ್ಸೋ ಕಾಯಿದೆಯಡಿ ಬಂಧಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಪುತ್ತೂರು ಠಾಣಾ ವ್ಯಾಪ್ತಿಯ ಬಾಲಕಿ ಜ. 30ರಂದು ಸಾವನ್ನಪ್ಪಿದಳು. ಈ ಸಂದರ್ಭ ವೈದ್ಯಕೀಯ ಪರೀಕ್ಷೆಯಲ್ಲಿ ಆಕೆ ಮೂರು ತಿಂಗಳ ಗರ್ಭಿಣಿ ಎಂಬುದು ದೃಢಪಟ್ಟಿತ್ತು. ಬಾಲಕಿಯ ತಾಯಿ ಸಂಪ್ಯ ಪೊಲೀಸರಿಗೆ ನೀಡಿದ ದೂರಿನಂತೆ ಪೊಲೀಸರು ಮಾಡ್ನೂರು ನಿವಾಸಿ ಶ್ರೀಧರನನ್ನು ಬಂಧಿಸಿದ್ದಾರೆ.