ಬಂಟ್ವಾಳ, ಆ 17 (Daijiworld News/MSP): ವಿದೇಶದಲ್ಲಿ ಉದ್ಯೋಗದಲ್ಲಿರುವ , ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾಮದ ಕಲಾ ಬಾಗಿಲು ನಿವಾಸಿಯೊಬ್ಬ ಸ್ವಾತಂತ್ರ್ಯ ದಿನಾಚರಣೆಯಂದು ಪಾಕಿಸ್ತಾನದ ದ್ವಜದ ಚಿತ್ರ ಹಾಗೂ ಪಾಕ್ ಪರ ಸಂದೇಶವನ್ನು ಹಾಕಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಸಾಮಾಜಿಕ ಅಶಾಂತಿ ಸೃಷ್ಟಿಸಲು ಯತ್ನಿಸಿದ್ದಾನೆ ಎಂದು ಆರೋಪಿಸಿ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಲಾಬಾಗಿಲಿನ ಮಹಮ್ಮದ್ ನದೀಮ್ ವಿರುದ್ದ ದೂರು ದಾಖಲಿಸಲಾಗಿದೆ. ಈತನ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ. ಇರ್ವತ್ತೂರಿನ ದೇವಿಪ್ರಸಾದ್ ಶೆಟ್ಟಿ ದೂರು ಸಲ್ಲಿಸಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಬಂಟ್ವಾಳದಲ್ಲಿ ಶಾಂತಿ ಕದಡುವ ಈ ಪ್ರಕರಣದ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಅವರು ಹಿರಿಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.