ಮಂಗಳೂರು, ಆ.19(Daijiworld News/SS): ಶಾಲಾ ಮಕ್ಕಳ ಸುರಕ್ಷತೆ ಹಾಗೂ ಭದ್ರತೆಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ಶಾಲಾ ಮಕ್ಕಳ ವಾಹನ ಚಾಲಕರು ಶಿಸ್ತಿನಿಂದ ವಾಹನ ಚಲಾಯಿಸಬೇಕು ಎಂದು ಮಂಗಳೂರು ಪೊಲೀಸ್ ಆಯುಕ್ತ ಡಾ| ಹರ್ಷ ಪಿ.ಎಸ್. ಕಿವಿಮಾತು ಹೇಳಿದ್ದಾರೆ.
ನಗರದಲ್ಲಿ ಶಾಲಾ ಮಕ್ಕಳ ವಾಹನ ಚಾಲಕರ ಜೊತೆ ಮಂಗಳೂರು ಪೊಲೀಸ್ ಆಯುಕ್ತ ಡಾ| ಹರ್ಷ ಪಿ.ಎಸ್. ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆಗಾಗಿ ಯಾವ ಬದಲಾವಣೆಗಳನ್ನ ತರಬೇಕು ಮತ್ತು ಕಟ್ಟು ನಿಟ್ಟಿನ ಕ್ರಮ ಹಾಗೂ ಇತರ ಸಮಸ್ಯೆ, ಸವಾಲುಗಳ ಕುರಿತು ಚರ್ಚೆ ನಡೆಸಲಾಗಿದೆ. ಮಾತ್ರವಲ್ಲ, ಈ ಸಭೆಯಲ್ಲಿ ಮಕ್ಕಳ ಸುರಕ್ಷತೆಗಾಗಿ ಹಲವು ಕಟ್ಟು ನಿಟ್ಟಿನ ಕ್ರಮಗಳ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.