ಬೆಂಗಳೂರು,ಸೆ14: ರಾಜ್ಯದ ಮೀನುಗಾರಿಕೆ ಹಾಗೂ ಕ್ರೀಡಾ ಕ್ಷೇತ್ರಕ್ಕೆ ಕೇಂದ್ರ ಸರಕಾರ ನಿರ್ಲಕ್ಷ ತೋರುತ್ತಿದೆ ಎಂದು ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಕೇಂದ್ರ ಸರಕಾರ ರಾಜ್ಯದ ಮೀನುಗಾರಿಕೆ ಹಾಗೂ ಕ್ರೀಡಾ ಕ್ಷೇತ್ರಕ್ಕೆ ಬರಬೇಕಾದ ಅನುದಾನವನ್ನು ಕಡಿತ ಮಾಡುವ ಮೂಲಕ ಹಲವು ಯೋಜನೆಗಳು ಕುಂಠಿತ ಗೊಂಡಿವೆ ಎಂದು ಅವರು ಆರೋಪಿಸಿದ್ದಾರೆ.
ಯುವಜನರ ಬಗ್ಗೆ ಪ್ರಧಾನಿ ಮೋದಿ ಭಾಷಣ ಬೀಗುತ್ತಾರೆ. ಆದರೆ, ಕಾರ್ಯರೂಪಕ್ಕೆ ತರುವಲ್ಲಿ ಸಂಪೂರ್ಣ ನಿರ್ಲಕ್ಷ ತೋರುತ್ತಾರೆ ಎಂದು ಕಿಡಿಕಾರಿದ್ದಾರೆ. ಇನ್ನು ಮೀನುಗಾರಿಕೆಗೆ ಸಂಬಂಧಿಸಿದಂತೆ ಸುಮಾರು 5 ಕಾಮಗಾರಿಗಳಲ್ಲಿ 75 ಶೇಕಡಾ ಅನುದಾನ ನೀಡಬೇಕಿತ್ತು. ಆದರೆ, ಪ್ರಧಾನಿ ಹುದ್ದೆಯನ್ನು ಮೋದಿ ಅಲಂಕರಿಸಿದ ಬಳಿಕ 60 ಶೇಕಡಕ್ಕೆ ಇಳಿದಿದೆ. ಆದ್ರೆ, ಪ್ರಸ್ತುತ 50 ಶೇಕಡಕ್ಕೆ ಇಳಿಸಲಾಗಿದ್ದು, ಇದರಿಂದ ಕಾಮಗಾರಿಗಳು ಕುಂಠಿತಗೊಳ್ಳುತ್ತಿವೆ ಎಂದರು. ಇನ್ನು ಕ್ರೀಡಾ ಕ್ಷೇತ್ರಕ್ಕೂ ಕೂಡ 52 ಕೋಟಿ ರೂಪಾಯಿಗಳು ಬರಬೇಕಿತ್ತು. ಆದರೆ ಕಳೆದ ಮೂರು ವರ್ಷಗಳಲ್ಲಿ ಕೇವಲ 10 ಕೋಟಿ ಮಾತ್ರ ಬಂದಿದೆ ಎಂದು ಕೇಂದ್ರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.