ಉಡುಪಿ, ಆ 22 (DaijiworldNews/SM): ನೂತನ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಪ್ರಗತಿ ಪರಿಶೀಲನಾ ಸಭೆ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.
ಜಿಲ್ಲೆಯಲ್ಲಿ ನಡೆದ ಪ್ರವಾಹದಿಂದ ತೊಂದರೆಗೊಳಗಾದ ಜನತೆಯ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಮನೆಗಳನ್ನು ಕಳೆದುಕೊಂಡ ಹಾಗೂ ಸೊತ್ತುಗಳನ್ನು ಜನರಿಗೆ ಹೆಚ್ಚಿನ ಸಹಾಯವನ್ನು ಶೀಘ್ರಗತಿಯಲ್ಲಿ ನೀಡಲು ಸಚಿವರು, ಮತ್ತು ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.
ಮುಖ್ಯಮಂತ್ರಿಗಳು ಈಗಾಗಲೇ ಘೋಷಿಸಿದ ಹಾಗೆ ನಿರ್ಧಿಷ್ಟ ಅನುದಾನವನ್ನು ಪರಿಹಾರದ ಮೂಲಕ ಜನತೆಗೆ ತಲುಪಿಸುವ ಕೆಲಸವನ್ನು ಮಾಡಬೇಕು ಎಂದು ಹೇಳಿದರು. ಜನರು ಯಾವುದೇ ಸಮಸ್ಯೆಗಳನ್ನು ತಂದಲ್ಲಿ ಕೂಡಲೇ ಅದರ ಬಗ್ಗೆ ಗಮನಹರಿಸಿ ಅದನ್ನು ಪರಿಹರಿಸಲು ಸಾಧ್ಯವಾದಷ್ಟು ಶ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಉಡುಪಿ ಶಾಸಕರಾದ ಕೆ ರಘುಪತಿ ಭಟ್ ,ಉಡುಪಿ ಜಿಲ್ಲಾಧಿಕಾರಿ ಜಿ.ಜಗಧೀಶ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಶಾ ಜೇಮ್ಸ್ ಇನ್ನಿತರ ಉಡುಪಿ ಜಿಲ್ಲೆಗೆ ಸಂಬಂಧಿಸಿದ ಇಲಾಖಾವಾರು ಅಧಿಕಾರಿಗಳು ಹಾಗೂ ಜನಪ್ರತಿನಿದಿಗಳು ಉಪಸ್ಥಿತರಿದ್ದರು.