ಮಂಗಳೂರು, ಡಿ 23: ಕದ್ರಿ ದೇವಳದಲ್ಲಿ ಧ್ವನಿವರ್ಧಕ ಬಳಕೆ ನಿಷೇಧಿಸಲು ಸಲ್ಲಿಸಿರುವ ಮನವಿ ಇದೀಗ ವಿವಾದಕ್ಕೆ ಕಾರಣವಾಗಿದೆ.
ನಗರದ ಅತ್ಯಂತ ಪುರಾತನ ಕದ್ರಿ ಶ್ರೀ ಮಂಜುನಾಥ ಸ್ವಾಮಿ ದೇವಾಲಯದಲ್ಲಿ ಧ್ವನಿವರ್ಧಕ ಬಳಸುವುದರಿಂದ ಶಬ್ಧ ಮಾಲಿನ್ಯ ಉಂಟಾಗುತ್ತಿದೆ ಎಂದು ಸ್ಥಳೀಯರು ದೂರು ನೀಡಿದ್ದು, ಈ ಹಿನ್ನೆಲೆ ಹಿಂದು ಪರ ಸಂಘಟನೆಗಳು ದೇವಾಲಯದ ಎದುರು ಉಗ್ರ ಪ್ರತಿಭಟನೆ ನಡೆಸಲು ಮುಂದಾಗಿದೆ.
ಮೈಕ್ ಅಳವಡಿ ಸ್ಥಳೀಯ ನಿವಾಸಿಗಳಿಗೆ ಶಬ್ದ ಮಾಲಿನ್ಯ ಉಂಟಾಗುತ್ತಿದೆ ಎಂದು ಸ್ಥಳೀಯ ನಿವಾಸಿ ಬ್ಲೇನಿ ಡಿ ಸೋಜ ಎಂಬವರು ಜಿಲ್ಲಾಧಿಕಾರಿ ಮತ್ತು ಮೇಯರ್ ಅವರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಧಾರ್ಮಿಕ ದತ್ತಿ ಇಲಾಖೆಯಿಂದ ದೇವಸ್ಥಾನದ ಕಾರ್ಯನಿರ್ವಹಣಾಧಿಖಾರಿಗಳಿಗೆ ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ನೊಟೀಸ್ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ಹಿಂದೂ ಸಂಘಟನೆಗಳು ಇಲಾಖೆ ನೀತಿ ವಿರುದ್ಧ ಉಗ್ರ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಕದ್ರಿ ದೇವಾಲಯದಲ್ಲಿ ದಿನನಿತ್ಯ ಕೇಳಿಬರುತ್ತಿರುವ ಧ್ವನಿವರ್ಧಕದಿಂದಾಗಿ ಪರಿಸರವಾಸಿಗಳಿಗೆ ಶಬ್ದ ಮಾಲಿನ್ಯ ಉಂಟಾಗುತ್ತಿದ್ದು, ಇದಕ್ಕೆ ನಿಷೇಧ ಹೇರಬೇಕೆಂದು ಸ್ಥಳೀಯರು ಧಾರ್ಮಿಕ ದತ್ತಿ ಇಲಾಖೆಗೆ ಸೂಚಿಸಿದ ಹಿನ್ನೆಲೆಯಲ್ಲಿ ಇಲಾಖೆ ವತಿಯಿಂದ ದೇಗುಲಕ್ಕೆ ಇದೀಗ ನೊಟೀಸ್ ಜಾರಿ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ಹಿಂದೂ ಸಂಘಟನೆಗಳ ಕಾರ್ಯಕರ್ತರು ದೇಗುಲದ ವಠಾರದಲ್ಲಿ ಜಮಾಯಿಸಿ ಉದ್ವಿಗ್ನ ಸ್ಥಿತಿ ಉಂಟಾಗಿದೆ.