ಪುತ್ತೂರು, ಡಿ 23: ಗುಜರಾತ್ ಮಾದರಿಯಂತೆ ರಾಜ್ಯದಲ್ಲೂ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಆಶಾಭಾವ ವ್ಯಕ್ತಪಡಿಸಿದ್ದಾರೆ.
ಪುತ್ತೂರಿನ ಒಕ್ಕಲಿಗ ಗೌಡ ಸಂಘದ ವಾರ್ಷಿಕ ಸಮಾವೇಷದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪಕ್ಷದ ರಾಷ್ಟ್ರೀಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಕುರಿತು ಚರ್ಚೆ ನಡೆಯುತ್ತಿದೆ. ಯಾರಿಗೆ ಟಿಕೆಟ್ ನೀಡಬೇಕು ಎನ್ನುವ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ಇದೇ ಸಂದರ್ಭ ಮಾತನಾಡಿದ ಅವರು ಮಹದಾಯಿ ನೀರು ಹಂಚಿಕೆ ವಿಚಾರದಲ್ಲಿ ಬಿಜೆಪಿ ತನ್ನ ನಿಲುವಿಗೆ ಬದ್ಧವಾಗಿದೆ ಎಂದು ತಿಳಿಸಿದರು.