ಉಳ್ಳಾಲ, ಆ 26 (DaijiworldNews/SM): ಇಲ್ಲಿನ ಸೋಮೇಶ್ವರದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಮನೆಗೆ ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಉಳ್ಳಾಲ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಈ ವೇಳೆ ಮನೆಯಲ್ಲಿದ್ದ ಇಬ್ಬರು ಮಹಿಳಾ ಆರೋಪಿಗಳನ್ನು ಬಂಧಿಸಲಾಗಿದೆ.
ಮಂಗಳೂರು ನಗರ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ದ್ವಾರದ ಬಳಿಯಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರು ಮಹಿಳೆಯರನ್ನು ಬಂಧಿಸಿದ್ದಾರೆ. ಅರುಂದತಿ ಹಾಗೂ ಸ್ವರಸ್ವತಿ ಬಂಧಿತ ಆರೋಪಿಗಳಾಗಿದ್ದಾರೆ. ಇನ್ನು ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ವಶಕ್ಕೆ ಪಡೆದ ಆರೋಪಿಗಳನ್ನು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಆರೋಪಿಗಳಿಂದ ಮೊಬೈಲ್ ಹಾಗೂ 20 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ. ಮಹಿಳಾ ಪಿಂಪ್ ಗಳು ಈ ಮನೆಯನ್ನು ಬಾಡಿಗೆಗೆ ಪಡೆದು ಯುವತಿಯರನ್ನು ಈ ಮನೆಯಲ್ಲಿ ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆಗೆ ಬಳಸಿಕೊಂಡು ಹಣವನ್ನು ಗಳಿಸುತ್ತಿದ್ದರು.
ವೇಶ್ಯಾವಾಟಿಕೆಗೆ ಬಳಾಸಲಾಗುತ್ತಿದ್ದ ಓರ್ವನೊಂದ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಮಹಿಳಾ ಪಿಂಪ್ ಗಳನ್ನು ಮುಂದಿನ ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.