ಮಂಗಳೂರು, ಸೆ.04(Daijiworld News/SS): ಪರಿಸರ ರಕ್ಷಣೆ ನಿಟ್ಟಿನಲ್ಲಿ ಇಲ್ಲಿನ ಮ.ನ.ಪಾ ಅಧಿಕಾರಿಗಳು ಹಲವು ಅಂಗಡಿಗಳ ಮೇಲೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಮಂಗಳೂರು ಮಹಾನಗರ ಪಾಲಿಕೆ ಪರಿಸರ ಎಂಜಿನಿಯರ್ ಮಧು ನೇತೃತ್ವದಲ್ಲಿ ಪಾಲಿಕೆ ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ.
ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳ ತಂಡ ನಗರದ ವಿವಿಧ ಕಡೆಗಳಿಗೆ ದಾಳಿ ನಡೆಸಿ ಸುಮಾರು 113 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದು, 22,800 ರೂ. ದಂಡ ವಸೂಲಿ ಮಾಡಿದ್ದಾರೆ. ಪಾಲಿಕೆ ಅರೋಗ್ಯ ವಿಭಾಗದ ವತಿಯಿಂದ ದಾಳಿ ನಡೆಸಲಾಗಿದೆ.
ನಗರದ ಸೆಂಟ್ರಲ್ ಮಾರ್ಕೆಟ್, ಕದ್ರಿ ಶಿವಬಾಗ್ ಹಾಗೂ ಕೊಟ್ಟಾರ ಚೌಕಿ ಪ್ರದೇಶದ ಅಂಗಡಿ ಮುಂಗಟ್ಟುಗಳಿಗೆ ದಾಳಿ ನಡೆಸಿ ಸಂಗ್ರಹದಲ್ಲಿದ್ದ ನಿಷೇಧಿತ ಪ್ಲಾಸ್ಟಿಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿ ಮಾಲೀಕರಿಗೆ ಸ್ಥಳದಲ್ಲೇ ದಂಡ ವಿಧಿಸಲಾಗಿದೆ.