ಮಂಗಳೂರು, ಸೆ.06(Daijiworld News/SS): ನಂಬರ್ ಪ್ಲೇಟ್ ರಹಿತ ವಾಹನಗಳ ಪತ್ತೆಗೆ ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದ್ದು, 40 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ನಗರದಲ್ಲಿ ನಂಬರ್ ಪ್ಲೇಟ್ ಇಲ್ಲದ ಸಾಕಷ್ಟು ವಾಹನಗಳು ಓಡಾಡುತ್ತಿದ್ದು, ಇಂತಹ ವಾಹನಗಳನ್ನು ಕಾನೂನು ಬಾಹಿರ ಚಟುವಟಿಕೆಗಳಿಗೆ ಉಪಯೋಗಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ, ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ.
ಸದ್ಯ ನಂಬರ್ ಪ್ಲೇಟ್ ಇಲ್ಲದ 40 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆ ನಿರಂತರ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.