ಬಿಗ್ ಬ್ರೇಕಿಂಗ್ : ದ.ಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ
Fri, Sep 06 2019 12:14:21 PM
ಮಂಗಳೂರುಸೆ 06 (Daijiworld News/RD): ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿ, ಉತ್ತಮ ಸೇವೆ ಸಲ್ಲಿಸಿದ್ದ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಸೆ.06ರ ಶುಕ್ರವಾರ ಇಂದು ಐಎಎಸ್ ಸೇವೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
ತಮ್ಮ ರಾಜೀನಾಮೆ ವೈಯಕ್ತಿಕ ಕಾರಣ ಎಂದು ತಿಳಿಸಿದ್ದಾರೆ.ತಮಿಳುನಾಡು ಮೂಲದವರಾದ ಸಸಿಕಾಂತ್ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ ಇಂಜಿನಿಯರ್ ಪದವೀಧರರು. ಈ ಹಿಂದೆ ರಾಯಚೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ದ.ಕ ಜಿಲ್ಲಾಧಿಕಾರಿಗೂ ಮುಂಚೆ ಇವರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದರು.
2017ರ ಅಕ್ಟೋಬರ್ ನಿಂದ ಅವರು ದ.ಕ. ಜಿಲ್ಲಾಧಿಕಾರಿಗಳಾಗಿದ್ದರು. ಜಿಲ್ಲೆಯಲ್ಲಿ ಕಳೆದ ವರ್ಷದ ಭೀಕರ ಮಳೆ, ಈ ವರ್ಷದ ಪ್ರವಾಹ, ಅತಿವೃಷ್ಠಿ, ಡೆಂಗ್ಯು, ಮರಳು ಮತ್ತಿತರ ಸಮಸ್ಯೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.