ಮಂಗಳೂರು, ಜು. 02 (DaijiworldNews/TA): ಪಂಪ್ವೆಲ್ನಿಂದ ನಂತೂರಿಗೆ ತೆರಳುವ ರಾಷ್ಟ್ರೀಯ ಹೆದ್ದಾರಿ ಬದಿಯ ಕೆಲವೆಡೆ ಸದ್ಯ ಕಸದ ಕೊಂಪೆಯಾಗಿ ಪರಿಣಮಿಸಿದೆ.

ಸದ್ಯ ಈ ಭಾಗದಲ್ಲಿ ರಸ್ತೆ ಅಗಲೀಕರಣವಾಗುತ್ತಿದ್ದು, ಖಾಲಿ ಜಾಗದಲ್ಲಿ ಕಸದ ರಾಶಿ ಸಹಿತ ತ್ಯಾಜ್ಯಗಳನ್ನು ಹಾಕಲಾಗುತ್ತಿದೆ. ಸದ್ಯ ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ ಕೊಂಪೆಯಾಗಿ ಪರಿಣಮಿಸಿದೆ. ಇಲ್ಲಿ ತ್ಯಾಜ್ಯ ಹಾಕುವವರ ವಿರುದ್ಧ ಸಂಬಂಧಪಟ್ಟ ಇಲಾಖೆ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ನಾಗರಿಕರು ಆಗ್ರಹಿಸಿದ್ದಾರೆ.