ಬಂಟ್ವಾಳ, ಜು. 07 (DaijiworldNews/AK): ಬಂಟ್ವಾಳ ತಾಲೂಕಿನ ಮಾಣಿ ಬಳಿ ಮಂಗಳವಾರ ಬೆಳಿಗ್ಗೆ ಸುರಿದ ಭಾರೀ ಮಳೆ ಮತ್ತು ಗಾಳಿಯಿಂದಾಗಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಮಾಣಿ-ಮೈಸೂರು ರಸ್ತೆಯಲ್ಲಿ ಸಂಚಾರ ಸ್ವಲ್ಪ ಸಮಯದ ವರೆಗೆ ಅಸ್ತವ್ಯಸ್ತಗೊಂಡಿತು.

ಮರ ರಸ್ತೆಗೆ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. . ತರಗತಿಗಳಿಗೆ ಹೋಗುತ್ತಿದ್ದ ಶಾಲಾ ಮಕ್ಕಳು, ಕೆಲಸಕ್ಕೆ ಹೋಗುವ ನೌಕರರು ಮತ್ತು ಇತರ ಪ್ರಯಾಣಿಕರಿಗೆ ಸಂಚಾರಕ್ಕೆ ಸಾಕಷ್ಟು ತೊಂದರೆಯಾಯಿತು.
ನಂತರ, ಸಂಬಂಧಪಟ್ಟ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಅಗಮಿಸಿ ಮರವನ್ನುತೆರವುಗೊಳಿಸುವ ಕಾರ್ಯಾಚರಣೆಯನ್ನು ಕೈಗೊಂಡರು. ಅಡಚಣೆಯನ್ನು ತೆರವುಗೊಳಿಸಿದ ನಂತರ, ವಾಹನ ಸಂಚಾರವನ್ನು ಸುಗಮಗೊಳಿಸಲಾಯಿತು.