ಕುಂದಾಪುರ, ಸೆ 09 (Daijiworld News/RD):ಕುಂದಾಪುರ ತಾಲೂಕಿನ ಹೆಸ್ಕುತ್ತೂರು ಎಂಬಲ್ಲಿ ಮನೆಯಿಂದ ತೆರಳಿದ ಮಹಿಳೆಯೋರ್ವರು ನಿಗೂಢವಾಗಿ ನಾಪತ್ತೆಯಾದ ಘಟನೆಗೆ ಸಂಬಂಧಿಸಿ ನಾಪತ್ತೆಯಾದ ಮಹಿಳೆಯ ಶವ ಪತ್ತೆಯಾಗಿದೆ.
ಹೆಸ್ಕುತ್ತೂರಿನ ಸರಕಾರಿ ಪ್ರಾಥಮಿಕ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ವಿಠಲ್ ಕುಲಾಲ್ ಅವರ ಸಹೋದರಿ ಕನಕ ಎನ್ನುವವರು ಕಳೆದ ರಾತ್ರಿ ಮನೆಯಿಂದ ಹೊರಗೆ ಹೋದವರು ಮನೆಗೆ ಬಾರದೆ ಕಾಣೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಅನುಮಾನಗೊಂಡ ಮನೆಯವರು ಹೆಸ್ಕುತ್ತೂರು ಹೊಳೆಯಲ್ಲಿ ಹುಡುಕಾಟ ನಡೆಸಿದ್ದು, ನಾಪತ್ತೆಯಾದ ಮಹಿಳೆಯ ಶವ ಸಮೀಪದ ಹೊಳೆಯಲ್ಲಿ ಸೇತುವೆ ಕೆಳಗೆ ಪತ್ತೆಯಾಗಿದೆ. ಆಕಸ್ಮಿಕವಾಗಿ ಜಾರಿ ಬಿದ್ದು ಸಾವನ್ನಪಿರಬಹುದು ಎಂದು ಅಂದಾಜಿಸಲಾಗಿದ್ದು, ಕಂಡ್ಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.