ಬೆಳ್ತಂಗಡಿ ಡಿ 28: ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲವಂತಿಗೆಗ್ರಾಮದಲ್ಲಿ ಬುಧವಾರ ನಡೆದಿದೆ.
ಗ್ರಾಮದ ಕಿಲ್ಲೂರು ನಿರ್ಕುಲಾಂಬೆ ಮನೆಯ ಶೀನಪ್ಪ ಪೂಜಾರಿ (55) ಆತ್ಮಹತ್ಯೆ ಮಾಡಿಕೊಂಡವರು. ಇವರು ವಿಪರೀತ ಮದ್ಯಪಾನದ ಚಟವನ್ನು ಹೊಂದಿದ್ದು ಇದೇ ವಿಚಾರದಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಇವರು ಡಿ. 24 ರಂದು ಬೆಳಿಗ್ಗೆ ಮನೆಯಲ್ಲಿ ಯಾರು ಇಲ್ಲದ ವೇಳೆ ದನದ ಕೊಟ್ಟಿಗೆಗೆ ಸಿಂಪಡಿಸಲು ತಂದಿಟ್ಟಿದ್ದ ವಿಷ ಸೇವಿಸಿದ್ದರು. ಕೂಡಲೇ ಅವರನ್ನು ಬೆಳ್ತಂಗಡಿ ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ದಾಖಲಾಯಿಸಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ. ಮೃತರ ಪುತ್ರ ಅವಿನಾಶ್ ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.