ಬಂಟ್ವಾಳ, ಆ. 16 (DaijiworldNews/TA): ನ್ಯಾಯಾಲಯದ ಆವರಣದಲ್ಲಿ ನಿರ್ಮಿಸಲಾದ ಕೋರ್ಟ್ ಭದ್ರತಾ ಕೊಠಡಿಯನ್ನು ಬಂಟ್ವಾಳ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶ ಅನಿಲ್ ಪ್ರಕಾಶ್ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶ ರಾಜೇಂದ್ರಕುಮಾರ್ ಕೆ.ಎಸ್., ಹೆಚ್ಚುವರಿ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶೆ ಕುಮಾರಿ ಸೌಂದರ್ಯ ಎಂ., ಚಿಕ್ಕಮಗಳೂರು ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ಧನವತಿ, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚಾರ್ಡ್ ಡಿ. ಕೊಸ್ತಾ ಸೇರಿದಂತೆ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು, ವಕೀಲರು ಉಪಸ್ಥಿತರಿದ್ದರು.
ನ್ಯಾಯಾಲಯದ ಭದ್ರತೆ ಹಾಗೂ ನ್ಯಾಯಾಲಯಕ್ಕೆ ಆಗಮಿಸುವ ಸಾರ್ವಜನಿಕರು, ನ್ಯಾಯಾಂಗ ಸಿಬ್ಬಂದಿ ಮತ್ತು ವಕೀಲರ ಸುರಕ್ಷತೆಯ ದೃಷ್ಟಿಯಿಂದ ಭದ್ರತಾ ಕೊಠಡಿಯ ವ್ಯವಸ್ಥೆ ಮಾಡಲಾಗಿದೆ.