ಮಂಗಳೂರು/ಉಡುಪಿ, ಆ. 16 (DaijiworldNews/AA): ನಾಗರ ಪಂಚಮಿ ಹಬ್ಬದ ಪ್ರಯುಕ್ತ ದ.ಕನ್ನಡ, ಉಡುಪಿ ಜಿಲ್ಲೆಯ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ಆಗಸ್ಟ್ 17 ಸೋಮವಾರದಂದು ಸಾರ್ವತ್ರಿಕ ರಜೆ ಘೋಷಿಸಿ ಉಭಯ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ಹೊರಡಿಸಿದೆ.


ಹಬ್ಬದ ಹಿನ್ನೆಲೆ ಉಭಯ ಜಿಲ್ಲೆಗಳ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಹಾಗೂ ಉಡುಪಿ ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಲ್ಲಿ ನಾಗರ ಪಂಚಮಿ ಹಬ್ಬವನ್ನು ಬಹಳ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತದೆ. ನಾಗರ ಪಂಚಮಿ ಹಬ್ಬವು ಹಿಂದೂ ಸಂಸ್ಕೃತಿಯಲ್ಲಿ ಸಾಲು ಸಾಲು ಹಬ್ಬಗಳ ಆಗಮನಕ್ಕೆ ಮುನ್ನ ಬರುವ ಮೊದಲ ಹಬ್ಬವಾಗಿದೆ.
ಪ್ರತಿವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯಂದು ನಾಗರಪಂಚಮಿ ಹಬ್ಬವನ್ನು ಆಚರಿಸಲಾಗುತ್ತದೆ. ನಾಗರ ಪಂಚಮಿ ಹಬ್ಬದಂದು ಜನರು ತಮ್ಮ ಮೂಲ ನಾಗಸನ್ನಿಧಿಗೆ ತೆರಳಿ ಪೂಜೆಯನ್ನು ಸಲ್ಲಿಸುವ ವಾಡಿಕೆಯಿದೆ.