ಪುತ್ತೂರು, ಸೆ 15 (Daijiworld News/RD): ಬಟ್ಟೆಗಳಿಗೆ ಇಸ್ತ್ರಿ ಹಾಕುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶವಾಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಶನಿವಾರ ಸಂಭವಿಸಿದೆ.
ಮೃತರು ಗಣೇಶ್ ಕೆ.ಎಸ್. (36) ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನ ಬೊಳುವಾರಿನ ಎಲೆಕ್ಟ್ರಿಕಲ್ ಅಂಗಡಿ ಹೊಂದಿದ್ದು, ಕೋಡಿಂಬಾಡಿ ಗ್ರಾಮದ ದರ್ಖಾಸು ನಿವಾಸಿ. ರಾತ್ರಿ 1.30ರ ಹೊತ್ತಿಗೆ ಈ ಘಟನೆ ಸಂಭವಿಸಿದೆ. ಮೃತರು ತಾಯಿ, ಪತ್ನಿ ಹಾಗೂ ಪುತ್ರರನ್ನು ಅಗಲಿದ್ದಾರೆ.
ಗಣೇಶ್ ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿದ್ದರು. ಎಲೆಕ್ಟ್ರಿಕಲ್ ಉಪಕರಣ ದುರಸ್ಥಿ ಹಾಗೂ ವೈಡಿಂಗ್ ನಲ್ಲಿ ನುರಿತರಾಗಿದ್ದರು. ಮೃತರ ಮನೆಗೆ ಶಾಸಕ ಸಂಜೀವ ಮಠಂದೂರು, ಮೊದಲಾದ ಸದಸ್ಯರು ಭೇಟಿ ನೀಡಿ ಸಂತಾಪ ಸೂಚಿಸಿದರು.