ಮಂಗಳೂರು, ಸೆ 16 (Daijiworld News/RD): ಗಿರಿಗಿಟ್ ತುಳು ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ತಂದ ವಕೀಲರ ಬಗ್ಗೆ ಸಾಮಾಜಿಕ ಜಾಲಾತಾಣದಲ್ಲಿ ಅವಹೇಳನಕಾರಿಯಾಗಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದ ನಗರದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಮಂಗಳೂರು ಉರ್ವದ ಭಾಸ್ಕರ (50) ಮತ್ತು ಕೃಷ್ಣಾಪುರದ ರಿತೇಶ್ (32) ಬಂಧಿತರು. ಈ ಪ್ರಕರಣ ಕುರಿತಂತೆ ಪೊಲೀಸರು ಶನಿವಾರ 8 ಮಂದಿಯನ್ನು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.
ಇನ್ನೂ ಕೆಲವು ಮಂದಿ ಆರೋಪಿಗಳಿದ್ದು, ಅವರನ್ನು ಕೂಡ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ತಡೆಯಾಜ್ಞೆ ತಂದ ವಕೀಲರ ಬಗ್ಗೆ ಸಾಮಾಜಿಕ ಜಾಲಾತಾಣದಲ್ಲಿ ಅವಹೇಳನಕಾರಿಯಾಗಿ ನಿಂದಿಸಿದ ಆರೋಪದ ಮೇಲೆ ಒಟ್ಟು ಎರಡು ಪ್ರತ್ಯೇಕ ಪ್ರಕರಣಗಳು ಬಂದರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.