ಬಂಟ್ವಾಳ, ಸೆ.29 (DaijiworldNews/TA): ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರ ಕಳ್ಳಿಗೆ ನಿವಾಸಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ. ಖಾದರ್ ಅವರು ಇಂದು ಭೇಟಿ ನೀಡಿದರು.



ಈ ಸಂದರ್ಭದಲ್ಲಿ ಸಚಿವ ಯು.ಟಿ. ಖಾದರ್ ಅವರು ರಮಾನಾಥ ರೈ ಅವರ ಆರೋಗ್ಯದ ಕುರಿತು ವಿಚಾರಿಸಿ, ಆರೋಗ್ಯ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡರು. ಇದೇ ವೇಳೆ ರಮಾನಾಥ ರೈ ಅವರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿ, ಶೀಘ್ರ ಚೇತರಿಕೆಗೆ ಹಾರೈಸಿದರು. ಭೇಟಿಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.