ಮಂಗಳೂರು, ಸೆ.29 (DaijiworldNews/AA): ನಗರದ ಕರಂಗಲಪಾಡಿಯ ಕೋರ್ಟ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ಮತ್ತು ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೋರ್ಟ್ ರಸ್ತೆಯ ಇಳಿಜಾರಿನಲ್ಲಿ ಸಂಚರಿಸುತ್ತಿದ್ದ ಗೂಡ್ಸ್ ಆಟೋ ಹಾಗೂ ಕರಂಗಲಪಾಡಿ ಕಡೆಯಿಂದ ಕೋರ್ಟ್ ರಸ್ತೆಗೆ ಪ್ರವೇಶಿಸುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಅದೇ ರಸ್ತೆಯಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೂ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಹಾಗೂ ಗೂಡ್ಸ್ ಆಟೋ ಚಾಲಕ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಕಾರು, ಆಟೋ ಹಾಗೂ ದ್ವಿಚಕ್ರ ವಾಹನ ಸಂಪೂರ್ಣ ಜಖಂಗೊಂಡಿವೆ.
ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.