ಬೆಂಗಳೂರು, ಸೆ 16(DaijiworldNews/SM): ನೂತನ ಸರಕಾರದ ಸಚಿವರಿಗೆ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದ್ದು, ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೋಟ ಶ್ರೀನಿವಾಸ್ ಪೂಜಾರಿಯವರನ್ನು ನೇಮಕ ಮಾಡಲಾಗಿದೆ.
ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿರುವ ಸಿಎಂ ಬಿಎಸ್ ಯಡಿಯೂರಪ್ಪನವರು ದ.ಕ. ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಕೋಟ ಶ್ರೀನಿವಾಸ್ ಪೂಜಾರಿಯವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಇನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ನೇಮಕ ಮಾಡಲಾಗಿದೆ.
ಇನ್ನು ಕೆ.ಎಸ್. ಈಶ್ವರಪ್ಪ ಅವರನ್ನು ಶಿವಮೊಗ್ಗ ಹಾಗೂ ದಾವಣಗೆರೆ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರನ್ನು ಬಾಗಲಕೋಟೆ ಕಲಬುರಗಿ, ಡಾ. ಆಶ್ವಥನಾರಾಯಣ ಅವರನ್ನು ರಾಮನಗರ ಹಾಗೂ ಚಿಕ್ಕಬಳ್ಳಾಪುರ, ಲಕ್ಷ್ಮಣ ಸವದಿಯವರನ್ನು ಬಳ್ಳಾರಿ, ಕೊಪ್ಪಳ, ಆರ್. ಅಶೋಕ್ ಅವರನ್ನು ಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯ, ಜಗದೀಶ್ ಶೆಟ್ಟರ್ ಅವರನ್ನು ಬೆಳಗಾವಿ, ಹುಬ್ಬಳಿಯ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.