ಪುತ್ತೂರು, ಸೆ 19 (Daijiworld News/MSP): ಬೆಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕಾರೊಂದು ಮೋರಿಗೆ ಡಿಕ್ಕಿ ಹೊಡೆದು ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಶ್ರೀ ಚೌಡೇಶ್ವರಿ ದೇವಸ್ಥಾನದ ಸಮೀಪ ಸೆ.19 ರಂದು ಮಧ್ಯಾಹ್ನ ನಡೆದಿದೆ.
ಮೃತ ಚಾಲಕನನ್ನು ಬೆಂಗಳೂರು ಜಾಲ ಹಳ್ಳಿ ನಿವಾಸಿ ನಾಗರಾಜ(60) ಎಂದು ಗುರುತಿಸಲಾಗಿದೆ. ಇನ್ನು ಕಾರಿನಲ್ಲಿದ್ದ ಬೆಂಗಳೂರು ಜಾಲಹಳ್ಳಿ ನಿವಾಸಿ ಹನುಮಂತ ನಾಯಕ್ (26) ಎಂಬವರು ಗಾಯಗೊಂಡು ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಬೆಂಗಳೂರಿನಿಂದ ಪುತ್ತೂರು ವಿವೇಕಾನಂದ ಕಾಲೇಜಿಗೆ ಬರುತ್ತಿದ್ದರು ಎಂದು ಹೇಳಲಾಗಿದೆ