ಸೋನಿಪತ್, ಡಿ 30: ಕಾರ್ಗಿಲ್ ಹುತಾತ್ಮ ಯೋಧರ ಪತ್ನಿಯೊಬ್ಬರು ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದ ಪರಿಣಾಮ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಹರಿಯಾಣದ ಸೋನಿಪತ್ ನಲ್ಲಿ ನಡೆದಿದೆ.
ಯೋಧರ ಪತ್ನಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಧಾರ ಕಾರ್ಡ್ ತೋರಿಸದಿದ್ದರಿಂದ ವೈದ್ಯರು ಚಿಕಿತ್ಸೆ ನಿರಾಕರಿಸಿದ್ದಾರೆ. ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರಕದ ಪರಿಣಾಮ ಯೋಧನ ಪತ್ನಿ ಮೃತಪಟ್ಟಿದ್ದಾರೆ.
ಆಸ್ಪತ್ರೆಯಲ್ಲಿ ವೈದ್ಯರು ಆಧಾರ್ ಕಾರ್ಡ್ ಕೇಳುವಾಗ ಮೊಬೈಲ್ ನಲ್ಲಿದ್ದ ಆಧಾರ್ ಕಾರ್ಡ್ ಫೋಟೋ ತೋರಿಸಿದ್ದಾರೆ. ಆದರೆ ಈ ವೇಳೆ ವೈದ್ಯರು ಒರಿಜನಲ್ ದಾಖಲೆಗಳನ್ನು ತಂದು ತೋರಿಸೋವರೆಗೆ ಚಿಕಿತ್ಸೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ಆರಂಭಿಸದ ಕಾರಣ ಮಹಿಳೆ ಮೃತಪಟ್ಟಿದ್ದಾರೆ.