ಮಂಗಳೂರು, ಸೆ 20(DaijiworldNews/SM): ದ.ಕ. ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಸರಾ ರಜೆಯನ್ನು ಅಕ್ಟೋಬರ್ 1ರಿಂದ 15ರ ತನಕ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ ಎಂದರು. ಇನ್ನು ರಜೆಯಲ್ಲಿ ಬದಲಾವಣೆ ಮಾಡಿರುವುದರಿಂದ ಮಂಗಳೂರು ದಸರಾದಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರಿಗೆ ಅವಕಾಶ ದೊರೆಯಲಿದೆ ಎಂದರು.