ಮಂಗಳೂರು, ಸೆ 23 (Daijiworld News/RD): ದಸರಾ ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಗೊಳಪಟ್ಟಿರುವ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಮಟ್ಟದ ಕಾಲೇಜುಗಳಿಗೆ ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 15 ರವರೆಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಗೊಳಪಟ್ಟಿರುವ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಸಂಯೋಜಿತ/ಸ್ವಾಯತ್ತ/ ಘಟಕ ಪದವಿ ಮಟ್ಟದ ಕಾಲೇಜುಗಳಿಗೆ ದಸರಾ ರಜೆ ನೀಡುವುದಾದಲ್ಲಿ ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 15 ರವರೆಗೆ ನೀಡುವಂತೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ಸೂಚನೆ ನೀಡಿದ್ದಾರೆ. ಜೊತೆಗೆ ನಷ್ಟವಾದ ತರಗತಿಗಳನ್ನು ಹೊಂದಾಣಿಕೆ ಮಾಡುವಂತೆ ಹೇಳಿದ್ದಾರೆ. ಇನ್ನುಳಿದಂತೆ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂಬ ಸುತ್ತೋಲೆಯನ್ನು ಮಂಗಳೂರು ವಿಶ್ವವಿದ್ಯಾನಿಲಯ ಪ್ರಕಟಿಸಿದೆ.