ಕಾಸರಗೋಡು, ಸೆ 23(DaijiworldNews/SM): ನಗರದ ಹೊರವಲಯದ ನುಳ್ಳಿಪ್ಪಾಡಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವನನ್ನು ನಗರ ಠಾಣಾ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಉಳಿದ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಆದಿತ್ಯವಾರ ರಾತ್ರಿ ತಂಡವು ಆಸ್ಪತ್ರೆಗೆ ನುಗ್ಗಿ ದಾಂದಲೆ ನಡೆಸಿತ್ತು. ಘಟನೆಯಲ್ಲಿ ಆಸ್ಪತ್ರೆಗೆ ನಷ್ಟ ಉಂಟಾಗಿತ್ತು.
ಇನ್ನು ದಾಂಧಲೆಯಿಂದ ಭಯಗೊಂಡು ಆಸ್ಪತ್ರೆಯಲ್ಲಿದ್ದ ರೋಗಿಗಳು, ಸಿಬ್ಬಂದಿಗಳು ಓಡುವ ಪರಿಸ್ಥಿತಿ ಉಂಟಾಗಿತ್ತು. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದರು, ಅಷ್ಟರಲ್ಲೇ ಆರೋಪಿಗಳ ತಂಡವು ಪರಾರಿಯಾಗಿತ್ತು. ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ತಂದ ತಂಡವು ದಾಂಧಲೆ ನಡೆಸಿತ್ತು.