ಪುತ್ತೂರು, ಸೆ.24(Daijiworld News/SS): ಇಲ್ಲಿನ ಆರ್ಯಾಪು ಗ್ರಾಮದ ದೇವಸ್ಯ ಸಮೀಪದ ರಂಜತ್ ರೈ ಎಂಬವರ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಲಾಗಿದೆ.
ಆರೋಪಿಯನ್ನು ಕೊಯಿಲ ಗ್ರಾಮ ನಿವಾಸಿ ಇಬ್ರಾಹಿಂ ಕಲಂದರ್ (31) ಎಂದು ಗುರುತಿಸಲಾಗಿದೆ.
ಬಂಟ್ವಾಳ ತಾಲೂಕಿನ ವಿಟ್ಲ ಎಂಬಲ್ಲಿ ಆರೋಪಿಯನ್ನು ಬಂಧಿಸಿದ್ದು, ಈತನಿಂದ ಕಳವು ಮಾಡಿದ ಸುಮಾರು ಐವತ್ತು ಸಾವಿರ ಮೌಲ್ಯದ 20 ಗ್ರಾಂ ಚಿನ್ನದ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸದ್ಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.